ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ & ಗ್ಯಾಂಗ್ ಅರ್ಜಿ ವಿಚಾರಣೆ ಆರಂಭವಾಗಿದೆ.
ದರ್ಶನ್ ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಹೈಕೋರ್ಟ್ ನಿಂದ 7 ಮಂದಿ ಕೊಲೆ ಆರೋಪಿಗಳಿಗೆ ಜಾಮೀನು ನೀಡಿದ್ದು, ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.
ಜನವರಿ 6ರಂದು ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಲಾಗಿದ್ದು, ಇಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಾಗುತ್ತದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮಹಾದೇವನ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ.
ದರ್ಶನ್, ಪವಿತ್ರಾ ಗೌಡ, ನಾಗರಾಜು, ಅನುಕುಮಾರ್, ಲಕ್ಷ್ಮಣ್, ಜಗದೀಶ್, ಪ್ರದೋಶ್ ಅವರ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಲಿದ್ದು, ಕುತೂಹಲ ಮೂಡಿಸಿದೆ.