ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏ.2 ರಂದು ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಿಗದಿಯಾಗಿದೆ.
ನಟ ದರ್ಶನ್ ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಸದ್ಯ ನಟ ದರ್ಶನ್ ಡೆವಿಲ್ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದು, ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದರ ನಡುವೆ ಪೊಲೀಸರು ನಟ ದರ್ಶನ್ ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, .2 ರಂದು ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಿಗದಿಯಾಗಿದೆ.