ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಪ್ರಕರಣದ ಎ-15, ಎ-17 ಆರೋಪಿಗಳಾದ ಕಾರ್ತಿಕ್, ನಿಖಿಲ್ ನಾಯ್ಕ್ ಗೆ 57 ನೇ ಸಿಸಿಹೆಚ್ ಕೋರ್ಟ್ ಜಾಮೀನು ನೀಡಿದೆ. ಪ್ರಕರಣದ ಎ-16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ನೀಡಿದೆ. 17 ಆರೋಪಿಗಳ ಪೈಕಿ ಮೂವರಿಗೆ ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಜೂನ್ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ ಪ್ರಕರಣದ ವಿಚಾರಣೆಯ ನಂತರ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ವಿಚರಣಾಧೀನ ಕೈದಿಯಾಗಿದ್ದ ದರ್ಶನ್ ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ವಿರುದ್ಧ ಈಗಾಗಲೇ ತನಿಖೆ ನಡೆಸಿದ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ನಟ ದರ್ಶನ್ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಸೆ.27 ಕ್ಕೆ ವಿಚಾರಣೆ ಮುಂದೂಡಿದೆ. ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಸೆ.25 ರಂದು ನಡೆಯಲಿದೆ.