ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ & ಗ್ಯಾಂಗ್ ಗೆ 1 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.