ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಎ-1 ಆರೋಪಿ ಪವಿತ್ರಾಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಸಿಟಿ ಸಿವಿಲ್ & ಸೆಷನ್ಸ್ ಕೋರ್ಟ್ ಗೆ ಜಾಮೀನು ಕೋರಿ ಆರೋಪಿ ಪವಿತ್ರಾಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಆ.22 ರಂದು ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಆಕ್ಷೇಪಣೆ ಸಲ್ಲಿಸಲು ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ನಟ ದರ್ಶನ್ & ಗ್ಯಾಂಗ್ ಬರ್ಬರವಾಗಿ ಕೊಂದಿದೆ ಎಂಬ ಆರೋಪವಿದ್ದು, ಹಲವು ಮಹತ್ವದ ಸಾಕ್ಷ್ಯಗಳು ಕೋರ್ಟ್ ಗೆ ಲಭ್ಯವಾಗಿದೆ.