ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯ ನಟ ಚಿಕ್ಕಣ್ಣಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಪಶ್ಚಿಮ ವಿಭಾಗದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ ಎದುರಾಗಿದೆ. ಹೌದು. ನಟ ದರ್ಶನ್ ಶೆಡ್ ಗೆ ಹೋಗುವ ಮೊದಲು ( ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳ) ದರ್ಶನ್ ಚಿಕ್ಕಣ್ಣ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಕೊಲೆ ನಡೆಯುವದಕ್ಕೂ ಮುನ್ನ ಪಾರ್ಟಿ ಒಂದು ನಡೆದಿದ್ದು, ಈ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿದೆ. ಚಿಕ್ಕಣ್ಣಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲದೇ ಇದ್ರೂ ಕೊಲೆ ನಡೆದ ದಿನ ದರ್ಶನ್ ಜೊತೆ ಚಿಕ್ಕಣ್ಣ ಇದ್ದರು ಎಂಬ ಕಾರಣಕ್ಕೆ ನೋಟಿಸ್ ನೀಡಿದ್ದಾರೆ. ಪೊಲೀಸ್ ವಿಚಾರಣೆಗೆ ಹಾಜರಾಗಿ ನಟ ಚಿಕ್ಕಣ್ಣ ಕೂಡ ಹೇಳಿಕೆ ನೀಡುವ ಸಾಧ್ಯತೆಯಿದೆ.
ದರ್ಶನ್ ಜೊತೆ ಪಾರ್ಟಿ ಮಾಡುವಾಗ ಎಷ್ಟು ಜನ ಇದ್ರಿ..? ಯಾವ ವಿಚಾರದ ಬಗ್ಗೆ ಮಾತುಕತೆ ನಡೆಸಿದ್ರಿ..? ಎಂದು ನಟ ಚಿಕ್ಕಣ್ಣನನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಗ್ಯಾಂಗ್ ನ ಮತ್ತೋರ್ವ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ.ರೇಣುಕಾ ಸ್ವಾಮಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದ ಆರೋಪಿಗಳು ಚಿತ್ರ ಹಿಂಸೆ ನೀಡಿದ್ದರು. ಬಂಧಿತ 17 ಆರೋಪಿಗಳ ಪೈಕಿ ದೀಪಕ್ ಮತ್ತು ನಂದೀಶ್ ಅವರು ಮೆಗ್ಗರ್ ಸಾಧನ ಬಳಸಿ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಿದ್ದರು.