ಸಾರ್ವತ್ರಿಕ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತ ರಿಷಿ ಸುನಕ್ ಬ್ರಿಟನ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದು, ನೂತನ ಪ್ರಧಾನಿಯಾಗಿ ಕೀರ್ ಸ್ಟಾರ್ಮರ್ ಆಯ್ಕೆ ಖಚಿತವಾಗಿದೆ ಎನ್ನಲಾಗಿದೆ.
ಹೌದು. ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷವು 14 ವರ್ಷಗಳ ನಂತರ ಹೀನಾಯ ಸೋಲು ಕಂಡಿದೆ. ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷವು ಐತಿಹಾಸಿಕ ಯುಕೆ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಇಂದು ಬೆಳಗ್ಗೆ 5 ಗಂಟೆ ವೇಳೆಗೆ ಮತ ಎಣಿಕೆ ಆರಂಭವಾಗಿದ್ದು, 650 ಸ್ಥಾನಗಳ ಪೈಕಿ 326 ಸ್ಥಾನಗಳನ್ನು ಲೇಬರ್ ಪಕ್ಷ ಗೆದ್ದುಕೊಂಡಿದೆ.
ತಮ್ಮ ಪಕ್ಷ ಸೋಲುತ್ತಿದ್ದಂತೆ ರಿಷಿ ಸುನಕ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ವಿದಾಯ ಭಾಷಣ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಲೇಬರ್ ಪಕ್ಷವು ಗೆದ್ದಿದೆ. ಕೀರ್ ಸ್ಟಾರ್ಮರ್ ಗೆ ಕರೆ ಮಾಡಿ ಅಭಿನಂದನೆಗಳನ್ನು ತಿಳಿಸಿದ್ದೇನೆ ಎಂದರು.