ಬೆಂಗಳೂರು : ಬೆಂಗಳೂರಿನಲ್ಲಿ ರಾಬರಿ ಗ್ಯಾಂಗ್ ಒಂದು ಪ್ರತ್ಯಕ್ಷವಾಗಿದ್ದು, ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಲು ಗ್ಯಾಂಗ್ ಯತ್ನಿಸಿದೆ.
ಕೆ ಆರ್ ಪುರಂ ಕಿತ್ತಗನೂರಿನಲ್ಲಿ ಗ್ಯಾಂಗ್ ಒಂದು ಮಾರಕಾಸ್ತ್ರ ಹಿಡಿದು ಓಡಾಡಿದ್ದು, ಸ್ಥಳೀಯರು ಬೆಚ್ಚಿ ಬಿದಿದ್ದಾರೆ. ಮಧ್ಯರಾತ್ರಿ 2:30 ರ ಸುಮಾರಿಗೆ ಮನೆಗೆ ನುಗ್ಗಲು ಗ್ಯಾಂಗ್ ಯತ್ನಿಸಿದೆ.
ಮೂವರು ಮುಸುಕುಧಾರಿ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಲು ಸ್ಕೆಚ್ ಹಾಕಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗೆ ರಾಜ್ಯದಲ್ಲಿ ದರೋಡೆ ಕೃತ್ಯಗಳು ಹೆಚ್ಚಾದ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಶುರುವಾಗಿದ್ದು,ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.