ಮೈಸೂರು : ಮೈಸೂರು-ಬೆಂಗಳೂರು ಮೆಮು ರೈಲಿನಲ್ಲಿ ದರೋಡೆ ನಡೆದಿದ್ದು, ದುಷ್ಕರ್ಮಿಗಳು ಪ್ರಯಾಣಿಕರಿಗೆ ಚಾಕು ತೋರಿಸಿ ಬೆದರಿಸಿ ಹಣ, ಮೊಬೈಲ್ ದೋಚಿ ಪರಾರಿಯಾಗಿದ್ದಾರೆ.
ಮೈಸೂರು-ಬೆಂಗಳೂರು ಮೆಮು ರೈಲಿಗೆ ನುಗ್ಗಿದ ದುಷ್ಕರ್ಮಿಗಳು ಚಾಕು ತೋರಿಸಿ ಪ್ರಯಾಣಿಕರಿಗೆ ಬೆದರಿಸಿ ಹಣ , ಮೊಬೈಲ್ ಕಸಿದುಕೊಂಡಿದ್ದಾರೆ. ಈ ವಿಷಯ ತಿಳಿದ ಪೊಲೀಸರು ಚನ್ನಪಟ್ಟಣ ಬಳಿ ರೈಲು ಹತ್ತಿ ಆರೋಪಿಗಳನ್ನು ಬಂಧಿಸಲು ಮುಂದಾಗಿದ್ದಾರೆ.
ನಂತರ ಐವರು ದುಷ್ಕರ್ಮಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿ ಚಲಿಸುತ್ತಿದ್ದ ರೈಲಿನಿಂದ ಜಿಗಿದಿದ್ದಾರೆ.ಮೈಸೂರಿನ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.