alex Certify BREAKING : ರಾಕ್ ಲೈನ್ ವೆಂಕಟೇಶ್ ತಮ್ಮನ ಮನೆಯಲ್ಲಿ ಕಳ್ಳತನ ಪ್ರಕರಣ : ಏಳು ಮಂದಿ ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಕ್ ಲೈನ್ ವೆಂಕಟೇಶ್ ತಮ್ಮನ ಮನೆಯಲ್ಲಿ ಕಳ್ಳತನ ಪ್ರಕರಣ : ಏಳು ಮಂದಿ ಆರೋಪಿಗಳು ಅರೆಸ್ಟ್

ಬೆಂಗಳೂರು : ರಾಕ್ ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ‘ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದೂವರೆ ಕೋಟಿ ರೂ ಮೌಲ್ಯದ ಚಿನ್ನ. ಬೆಳ್ಳಿ ವಶಕ್ಕೆ ಪಡೆದಿದ್ದಾರೆ. ಕುಟುಂಬದವರು ಪ್ರವಾಸಕ್ಕೆ ಹೋಗಿದ್ದಾಗ ಕಳ್ಳತನ ನಡೆದಿದೆ. ಆರೋಪಿಗಳು ಈ ಹಿಂದೆ ಕೂಡ ಸಾಕಷ್ಟು ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಮಾಹಿತಿ ನೀಡಿದರು.

ನಟ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ನಡೆದಿದ್ದು, 5 ಕೆಜಿ ಚಿನ್ನ ಹಾಗೂ 6 ಲಕ್ಷ ನಗದು ಕಳ್ಳತನವಾಗಿತ್ತು. ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ರಾಕ್ ಲೈನ್ ವೆಂಕಟೇಶ್ ಸಹೋದರ ಭ್ರಮರೇಶ್ ಮನೆಯಲ್ಲಿ ಈ ಘಟನೆ ನಡೆದಿತ್ತು. ಮನೆಯವರು ಯುರೋಪ್ ಪ್ರವಾಸಕ್ಕೆ ಹೋದಾಗ ಮನೆ ಕಿಟಕಿ ಒಡೆದು ಮನೆಗೆ ನುಗ್ಗಿದ ಖದೀಮರು ಚಿನ್ನ ಹಾಗೂ ಹಣ ದೋಚಿದ್ದರು. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...