alex Certify BREAKING : ಪೊಲೀಸ್ ಸಿಬ್ಬಂದಿಗಳ ‘ವೈದ್ಯಕೀಯ ತಪಾಸಣೆ’ ಭತ್ಯೆ 500 ರೂ ಹೆಚ್ಚಳ : ಸಿಎಂ ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪೊಲೀಸ್ ಸಿಬ್ಬಂದಿಗಳ ‘ವೈದ್ಯಕೀಯ ತಪಾಸಣೆ’ ಭತ್ಯೆ 500 ರೂ ಹೆಚ್ಚಳ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಗಳ ವೈದ್ಯಕೀಯ ತಪಾಸಣೆ ಭತ್ಯೆ 500 ರೂ ಹೆಚ್ಚಳ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ನಂತರ ಮಾತನಾಡಿದರು.

ರಾಜ್ಯದ ಪೊಲೀಸ್ ಸಿಬ್ಬಂದಿಗಳ ವೈದ್ಯಕೀಯ ತಪಾಸಣೆ ಭತ್ಯೆ 500 ರೂ ಹೆಚ್ಚಳ ಮಾಡಲಾಗುತ್ತದೆ, ಈ ಹಿಂದೆ 1000 ರೂ ನೀಡಲಾಗುತ್ತಿತ್ತು , ಇದೀಗ 1500 ರೂಗೆ ಹೆಚ್ಚಳ ಮಾಡಲಾಗುತ್ತಿದೆ. 2013 ರಿಂದಲೂ ಹೆಚ್ಚಳ ಮಾಡಿರಲಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು. ಬಳಿಕ ಪೊಲೀಸ್ ಐಟಿ-V2, ITPA ಸರಳ ಆಪ್, ಪೊಲೀಸ್ ಮಿತ್ರ ಚಾಟ್ ಬಾಟ್, CG ನೋಂದಣಿ ಪೋರ್ಟಲ್, ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ, ಆರ್ಥಿಕ ಇಂಟೆಲಿಜೆನ್ಸ್ ತಂತ್ರಾಂಶಗಳನ್ನು ಬಿಡುಗಡೆ ಮಾಡಿದರು. ಇದೇ ಹೊತ್ತಿನಲ್ಲಿ ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...