ಬೆಂಗಳೂರು : RSS ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮೊಹಮ್ಮದ್ ಗೌಸ್ ನನ್ನು ಬಂಧಿಸಲಾಗಿದೆ.
2016 ರಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದಾರೆ.
ಮೂಲತಃ ಭಯೋತ್ಪಾದಕ ಸಂಘಟನೆಯೊಂದರ ಜೊತೆ ಗುರುತಿಸಿಕೊಂಡಿದ್ದ ಮೊಹಮ್ಮದ್ ಗೌಸ್ ನಯಾಜಿ ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ. ಇದರ ಬಗ್ಗೆ ಖಚಿತ ಸುಳಿವು ಹಿಡಿದ ಎನ್ಐಎ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
2016ರ ಅ.16ರಂದು ಶಿವಾಜಿನಗರದ ಕಾಮರಾಜ ರಸ್ತೆಯ ಶ್ರೀನಿವಾಸ ಮೆಡಿಕಲ್ ಸ್ಟೋರ್ ಮುಂಭಾಗ ರುದ್ರೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ನಂತರ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಎನ್ಐಎ ಅಧಿಕಾರಿಗಳು ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಗೌಸ್ ನಯಾಝಿ ಅಲಿಯಾಸ್ ಗೌಸ್ ಭಾಯ್ ಎಂಬಾತನಿಗೆ ಶೋಧ ನಡೆಸುತ್ತಿತ್ತು.