ಬೆಂಗಳೂರು : ಮುಸ್ಲಿಂ ಮಹಿಳೆಯರ ಬಗ್ಗೆ ಲಘುವಾಗಿ ಮಾತನಾಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಜಾಮೀನು ಮಂಜೂರು ಮಾಡಿ ಶ್ರೀರಂಗಪಟ್ಟಣ ಕೋರ್ಟ್ ಆದೇಶ ಹೊರಡಿಸಿದೆ.
ಶ್ರೀರಂಗಪಟ್ಟಣ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ನಿರೀಕ್ಷಣಾ ಜಾಮೀನು ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಪ್ರಭಾಕರ್ ಭಟ್ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಪಟ್ಟಣದ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶವನ್ನು ಜನವರಿ 17 ಕ್ಕೆ ಕಾಯ್ದಿರಿಸಿತ್ತು.
ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಂದು ಗಂಡ, ಪರ್ಮನೆಂಟ್ ಗಂಡನೇ ಇರಲಿಲ್ಲ. ಆದರೆ ತ್ರಿವಳಿ ತಲಾಕ್ ನಿಷೇಧದ ಮೂಲಕ ಪರ್ಮನೆಂಟ್ ಗಂಡನನ್ನು ಕೊಟ್ಟದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂದು ಹೇಳಿಕೆ ನೀಡಿದ್ದರು. ಮುಸ್ಲಿಂ ಮಹಿಳೆಯರಿಗೆ ಅವಮಾನ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶ್ರೀರಂಗಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿತ್ತು.