ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಸಾಗರದ ನಾ. ಡಿಸೋಜ ಅವರು ವಿಧಿವಶರಾಗಿದ್ದು, ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಕಲ ಪೊಲೀಸ್ ಗೌರವಗಳೊಂದಿಗೆ ಸಾಹಿತಿ. ನಾ. ಡಿಸೋಜ ಅಂತ್ಯಕ್ರಿಯೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಾರ್ಬರ್ಟ್ ಡಿಸೋಜ ಹೆಸರಾಂತ ಸಾಹಿತಿಗಳು ಹಾಗೂ ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕೃತರು. ಶಿವಮೊಗ್ಗ ಜಿಲ್ಲೆ ಇವರು ದಿನಾಂಕ:05.01.2025 ರಂದು ನಿಧನರಾಗಿರುತ್ತಾರೆ, ಸದರಿಯವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ.2014ರಲ್ಲಿ ಮಡಿಕೇರಿಯಲ್ಲಿ ನಡೆದ 80ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಕ್ಯಾತ ಕಾದಂಬರಿಕಾರ, ಕಥೆಗಾರ ನಾ. ಡಿಸೋಜ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ 7:30ಕ್ಕೆ ನಿಧನರಾಗಿದ್ದಾರೆ.