ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಹಿನ್ನೆಲೆ ಸ್ಯಾಂಡಲ್ ವುಡ್ ನಟಿ ರನ್ಯಾರಾವ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸದ್ಯ ನಟಿ ಜೈಲುಪಾಲಾಗಿದ್ದು, ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ಅವರನ್ನು ಡಿ.ಆರ್.ಐ. ಅಧಿಕಾರಿಗಳು ವಶಕ್ಕೆ ಕೇಳದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದ್ದು ರಾಜ್ಯದ ಇತಿಹಾಸದಲ್ಲಿ ಅತಿ ದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣ ಎನ್ನಲಾಗಿದೆ. ರನ್ಯಾ ರಾವ್ ಡಿಜಿಪಿ ಡಾ. ಕೆ. ರಾಮಚಂದ್ರರಾವ್ ಅವರ ಮಲಮಗಳಾಗಿದ್ದಾರೆ.
ನಟ ಸುದೀಪ್ ಅವರ ಮಾಣಿಕ್ಯ ಸಿನಿಮಾದಲ್ಲಿ ನಟಿಸಿದ್ದ ನಟಿ ರನ್ಯಾರಾವ್ ಸಿನಿಪ್ರಿಯರ ಗಮನ ಸೆಳೆದಿದ್ದರು. ದುಬೈನಿಂದ ಅಕ್ರಮ ಚಿನ್ನ ಸಾಗಾಟ ಮಾಡಿ ಕೆಂಪೇಗೌಡ ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.ವಿದೇಶದಿಂದ ಹೆಚ್ಚುವರಿ ಚಿನ್ನ ಸಾಗಾಟ ಮಾಡಿರುವ ಆರೋಪವಿದೆ. ನಟ ಗಣೇಶ್ ಅಭಿನಯದ ಪಟಾಕಿ ಹಾಗೂ ಸುದೀಪ್ ಜೊತೆ ಮಾಣಿಕ್ಯ ಚಿತ್ರದಲ್ಲಿ ಮಾನಸಾ ಪಾತ್ರ ಮಾಡಿದ್ದರು. ಅಲ್ಲದೇ ತಮಿಳಿನ ಸಿನಿಮಾ ಒಂದರಲ್ಲಿ ರನ್ಯಾರಾವ್ ಕಾಣಿಸಿಕೊಂಡಿದ್ದಾರೆ.