ಬೆಂಗಳೂರು : ನಟ ದರ್ಶನ್ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದ ರೌಡಿಶೀಟರ್ ಪುತ್ರ ಸತ್ಯನನ್ನು ಪರಪ್ಪನ ಅಗ್ರಹಾರ ಪೊಲೀಸರ ವಶಕ್ಕೆ ನೀಡಲಾಗಿದೆ.
ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾದ ಹಿನ್ನೆಲೆ ಸತ್ಯನನ್ನು ಪರಪ್ಪನ ಅಗ್ರಹಾರ ಪೊಲೀಸರ ವಶಕ್ಕೆ ನೀಡಲಾಗಿದೆ.
ಜೈಲಿನಲ್ಲಿದ್ದ ರೌಡಿ ಶೀಟರ್ ಧರ್ಮ ಜೊತೆ ವಿಡಿಯೋ ಕಾಲ್ ಮಾಡುವಾಗ ಸತ್ಯ ನಟ ದರ್ಶನ್ ಜೊತೆ ಕೂಡ ಮಾತನಾಡಿದ್ದನು. ಬ್ಯಾಡರಹಳ್ಳಿ ರೌಡಿಶೀಟರ್ ಜನಾರ್ಧನ ಪುತ್ರ ಈ ಸತ್ಯ ದರ್ಶನ್ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದನು. ಈ ಹಿನ್ನೆಲೆ ಆತನನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಆತನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರ ವಶಕ್ಕೆ ನೀಡಲಾಗಿದೆ.