ವಿಜಯಪುರ : ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಕುಖ್ಯಾತ ರೌಡಿಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಭೀಮಾ ತೀರದ ಹಂತಕ, ಕುಖ್ಯಾತ ರೌಡಿಶೀಟರ್ ಬಾಗಪ್ಪ ಹರಿಜನನನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ. ಬಾಗಪ್ಪ ಹರಿಜನ ಹಲವು ಕೊಲೆ ಹಾಗೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದನು.
ಮಂಗಳವಾರ ರಾತ್ರಿ ನಗರದ ರೇಡಿಯೋ ಕೇಂದ್ರದ ಬಳಿ ಬಾಗಪ್ಪನನ್ನು ದುಷ್ಮರ್ಮಿಗಳು ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ. ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ಥ ವಾಸವಾಗಿದ್ದನು. ಈತ ಮನೆಯಿಂದ ಹೊರ ಬರುತ್ತಿದ್ದಂತೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಎಸ್ಕೇಪ್ ಆಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.