alex Certify BREAKING : ‘ವಾಲ್ಮೀಕಿ ಅಭಿವೃದ್ದಿ ನಿಗಮ’ದಲ್ಲಿ ಹಗರಣ ಕೇಸ್ : ‘CBI’ ತನಿಖೆಗೆ ನೀಡಲು ಹೈಕೋರ್ಟ್ ನಕಾರ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ವಾಲ್ಮೀಕಿ ಅಭಿವೃದ್ದಿ ನಿಗಮ’ದಲ್ಲಿ ಹಗರಣ ಕೇಸ್ : ‘CBI’ ತನಿಖೆಗೆ ನೀಡಲು ಹೈಕೋರ್ಟ್ ನಕಾರ.!

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ದಿ ಹಗರಣದಲ್ಲಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಹೈಕೋರ್ಟ್ ನಿರಾಕರಿಸಿದೆ.

ತನಿಖೆ ಹೊಣೆ ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ  ರಿಟ್  ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಕುರಿತಾಗಿ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮನವಿ ಸಲ್ಲಿಸಿತ್ತು. ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯ ಪೀಠದಲ್ಲಿ ನಡೆದಿತ್ತು.2024ರ ಸೆಪ್ಟೆಂಬರ್ 30ರಂದು ವಿಚಾರಣೆಯನ್ನು ಮುಕ್ತಾಯಗೊಳಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...