ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ನೀಡಿದ ಬೆನ್ನಲ್ಲೇ ತಡರಾತ್ರಿ ಮತ್ತೆ ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಅಪರಿಚಿತನೊಬ್ಬ ಫೋನ್ ಕರೆ ಮಾಡಿ ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ. ರಾತ್ರಿ 11.30 ರ ಸುಮಾರಿಗೆ ಕರೆ ಮಾಡಿ ಬಾಂಬ್ ಬೆದರಿಕೆ ಹಾಕಿದ್ದಾನೆ.
ತಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ತಿಳಿಸಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.