ಚಿತ್ರದುರ್ಗ :ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬಿಟ್ಟು ಬಿಡದೇ ಅತಿಯಾದ ಮಳೆಯಾಗುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳು, ಎಲ್ಲಾ ಪ್ರಾಥಮಿಕ ಶಾಲೆಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ಬರಲು ತೊಂದರೆಯಾಗುತ್ತಿದ್ದು, ಚಿತ್ರದುರ್ಗ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಅಂಗನವಾಡಿ ಕೇಂದ್ರಗಳ ಮಕ್ಕಳ ಹಿತದೃಷ್ಟಿಯಿಂದ ದಿನಾಂಕ:26-07-2023 ಮತ್ತು ದಿನಾಂಕ:27-07-2023 ರಂದು ಎರಡು ದಿನಗಳು ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.