alex Certify BREAKING : 87 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು ಚನ್ನಬಸಪ್ಪ ಆಯ್ಕೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 87 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು ಚನ್ನಬಸಪ್ಪ ಆಯ್ಕೆ.!

ಮಂಡ್ಯ : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.

ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಮಂಡ್ಯದಲ್ಲಿ ಡಿಸೆಂಬರ್ 20ರಿಂದ ಮೂರು ದಿನ ಕಾಲ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ.

ಚೆನ್ನಬಸಪ್ಪನವರ ಪರಿಚಯ

ಕನ್ನಡ ಸಾಹಿತ್ಯಲೋಕಕ್ಕೆ ಅದರಲ್ಲೂ ಜಾನಪದ ಸಾಹಿತ್ಯಕ್ಕೆ ಅಪಾರ ಸೇವೆ ಸಲ್ಲಿಸಿರುವ ಗೊ. ರು. ಚೆನ್ನಬಸಪ್ಪನವರು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಗೊಂಡೇದಹಳ್ಳಿಯಲ್ಲಿ ೧೮ನೇ ಮೇ ೧೯೩೦ರಲ್ಲಿ ಜನಿಸಿದರು. ಅವರ ತಂದೆ ತಿಂಗಳಿಗೆ ಏಳು ರೂ. ಸಂಬಳದಲ್ಲಿ ಅನುದಾನಿತ ಶಾಲೆಯೊಂದರಲ್ಲಿ ಉಪಾಧ್ಯಾಯರಾಗಿದ್ದರು. ಅವರ ತಾಯಿಯವರು ಕಂಡವರ ಹೊಲಕ್ಕೆ ದಿನಕ್ಕೆ ಮೂರು ಆಣೆ ಕೂಲಿಗೆ ಹೋಗುತ್ತಿದ್ದರಂತೆ . ರಜದ ದಿನಗಳಲ್ಲಿ ಬಾಲಕ ಚನ್ನಬಸಪ್ಪನವರೂ ಕೂಲಿಗೆ ಹೋಗುತ್ತಿದ್ದರು. ಅವರಿಗೆ ದಿನಕ್ಕೆ ಒಂದೂವರೆ ಆಣೆ ಕೂಲಿ ಸಿಗುತ್ತಿತ್ತು. “ಆ ಹಣಕ್ಕಿಂತ ಮುಖ್ಯವಾಗುತ್ತಿದ್ದುದು ನಾವು ಕೂಲಿ ಹೋಗುತ್ತಿದ್ದ ಹೊಲದವರು ಕೊಡುತ್ತಿದ್ದ ಒಂದು ಹೊತ್ತಿನ ಊಟ!” ಎಂದು ತಮ್ಮ ಬಾಲ್ಯದ ಬಗ್ಗೆ ಗೊ.ರು. ಚನ್ನಬಸಪ್ಪನವರು ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ತರೀಕೆರೆ ತಾಲೂಕಿನ ಒಂದು ಚಿಕ್ಕ ಹಳ್ಳಿ-ಗೊಂಡೇದಹಳ್ಳಿ. ಗ್ರಾಮೀಣ ಪರಿಸರದಲ್ಲೇ ಬೆಳೆದ ಗೊ. ರು. ಚನ್ನಬಸಪ್ಪನವರು ಮಾಧ್ಯಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಯಾಗಿದ್ದಾಗ ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲುಗೊಂಡರು. ಆ ಸಂದರ್ಭದಲ್ಲಿ ಸಿದ್ಧವನಹಳ್ಳಿ ನಿಜಲಿಂಗಪ್ಪನವರು, ಗುದ್ಲೆಪ್ಪ ಹಳ್ಳಿಕೇರಿ, ಮೊದಲಾದ ನಾಡ ಅಭಿಮಾನಿಗಳನ್ನು ಇವರಿಗೆ ನಿಕಟವಾಗಿ ನೋಡಲು ಅವಕಾಶವಾಯಿತು. ಅವರ ನಡೆ-ನುಡಿಗಳು ಚನ್ನಬಸಪ್ಪನವರ ಮೇಲೆ ಅಳಿಯದ ಪ್ರಭಾವ ಬೀರಿದವು. ಇವರು ಪ್ರೌಢಶಾಲೆ ಕಲಿತದ್ದು ಬೀರೂರಿನಲ್ಲಿ..

• ೧೯೪೮ರ ವರ್ಷದಲ್ಲಿ ಶಾಲಾ ಶಿಕ್ಷಕರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ಚನ್ನಬಸಪ್ಪನವರು ಗಾಂಧೀ ಗ್ರಾಮದಲ್ಲಿ ಸಮಾಜ ಶಿಕ್ಷಣ ತರಬೇತಿಯನ್ನು ಪಡೆದವರು. ಭೂದಾನ ಚಳುವಳಿ, ವಯಸ್ಕರ ಶಿಕ್ಷಣ ಮತ್ತು ಸೇವಾದಳಗಳಲ್ಲಿ ನಿಷ್ಠಾವಂತರಾಗಿ ಚನ್ನಬಸಪ್ಪನವರು ಸೇವೆ ಸಲ್ಲಿಸಿದ್ದಾರೆ.

• ಚನ್ನಬಸಪ್ಪನವರು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಕಮಿಷನರ್ ಆಗಿ ಸಹಾ ಮಹತ್ವದ ಸೇವೆ ಸಲ್ಲಿಸಿದ್ದಾರೆ. ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾಗಿ ಮತ್ತು ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಅನೇಕ ಮಹತ್ವಪೂರ್ಣ ಕಾರ್ಯಕ್ರಮಗಳನ್ನು ನಡೆಸಿದ್ದಾರೆ.

• ಅವರ ಅಧಿಕಾರಾವಧಿಯಲ್ಲಿ ನೂರೈವತ್ತಕ್ಕೂ ಹೆಚ್ಚು ಮಹತ್ವ ಪೂರ್ಣ ಕೃತಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿತು. ಚನ್ನಬಸಪ್ಪನವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸಹಾ ಕಾರ್ಯನಿರ್ವಹಿಸಿದ್ದಾರೆ.

ಪ್ರಮುಖ ಕೃತಿಗಳು

• ಮಹಾದೇವಿ,
• ಸದಾಶಿವ ಶಿವಾಚಾರ್ಯ,
• ಕರ್ನಾಟಕ ಪ್ರಗತಿಪಥ,
• ಚೆಲುವಾಂಬಿಕೆ,
• ಕುನಾಲ,
• ಸಾಕ್ಷಿ ಕಲ್ಲು,
• ಬೆಳ್ಳಕ್ಕಿ ಹಿಂಡು ಬೆದರ್ಯಾವೊ,
• ಬಾಗೂರು ನಾಗಮ್ಮ,
• ಗ್ರಾಮ ಗೀತೆಗಳು,
• ವಿಭೂತಿ,
• ಕರ್ನಾಟಕ ಜನಪದಕಲೆಗಳು ಗೊ.ರು. ಚನ್ನಬಸಪ್ಪನವರ ಪ್ರಮುಖ ಬರಹಗಳು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...