alex Certify BREAKING : ಸ್ಯಾಂಡಲ್ ವುಡ್ ಹಿರಿಯ ನಟಿ ‘ಹೇಮಾ ಚೌಧರಿ’ ಆರೋಗ್ಯ ಸ್ಥಿತಿ ಗಂಭೀರ : ‘ICU’ ನಲ್ಲಿ ಚಿಕಿತ್ಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸ್ಯಾಂಡಲ್ ವುಡ್ ಹಿರಿಯ ನಟಿ ‘ಹೇಮಾ ಚೌಧರಿ’ ಆರೋಗ್ಯ ಸ್ಥಿತಿ ಗಂಭೀರ : ‘ICU’ ನಲ್ಲಿ ಚಿಕಿತ್ಸೆ

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ಪೋಷಕ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ದಿನಗಳಿಂದ ಬ್ರೈನ್ ಹೆಮರೇಜ್ನಿಂದ ಬಳಲುತ್ತಿದ್ದರು ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು , ತೀವ್ರ ನಿಗಾ ಘಟಕದಲ್ಲಿ ನಟಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ  ಎಂದು ತಿಳಿದು ಬಂದಿದೆ.

ಇತ್ತೀಚೆಗಷ್ಟೇ   ಅವರು   ನಟಿ ಲೀಲಾವತಿ ಅವರ ಪುಣ್ಯತಿಥಿಯಲ್ಲಿ ನಟಿ ಭಾಗವಹಿಸಿ ನಟ ವಿನೋದ್ ರಾಜ್ ಅವರಿಗೆ ಸಾಂತ್ವನ ಹೇಳಿದ್ದರು. ನಂತರ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ಹೇಮಾ ಚೌಧರಿ ʻಅಮೃತವರ್ಷಿಣಿʼ  ಸೇರಿದಂತೆ ಹಲವು ಸೀರಿಯಲ್ ನಲ್ಲಿ ನಟಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...