![](https://kannadadunia.com/wp-content/uploads/2024/01/Someshwara.jpg)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಮೃತ ಸೋಮೇಶ್ವರ ನಿಧನರಾಗಿದ್ದಾರೆ.
ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಕನ್ನಡ, ತುಳು ಭಾಷೆ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಸಮಾಜಮುಖಿ ಚಿಂತಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಅಮೃತ ಸೋಮೇಶ್ವರ ಅವರು ವಿಧಿವಶರಾಗಿದ್ದಾರೆ.
ನೂರಾರು ಮಂದಿ ಕಲೆ, ಸಾಹಿತ್ಯ, ಸಂಶೋಧನಾಸಕ್ತರಿಗೆ ಸದಾ ಕಾಲ ಪ್ರೇರಕ, ಮಾರ್ಗದರ್ಶಕರಾಗಿದ್ದ, ಜಾನಪದ ವಿದ್ವಾಂಸ ಪ್ರೊ. ಅಮೃತ ಸೋಮೇಶ್ವರ ಅವರ ಅಗಲಿಕೆಯು ನಾಡಿಗೆ ತುಂಬಲಾರದ ನಷ್ಟ. ಮೃತರ ಕುಟುಂಬ, ಶಿಷ್ಯ ವೃಂದಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ದಿನೇಶ್ ಗುಂಡೂರಾವ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.