alex Certify BREAKING : ಬೆಂಗಳೂರಲ್ಲಿ ಹೆಚ್ಚಾಯ್ತು ಕಾಮುಕರ ಅಟ್ಟಹಾಸ : ಮತ್ತೋರ್ವ ಯುವತಿಗೆ ಲೈಂಗಿಕ ಕಿರುಕುಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಹೆಚ್ಚಾಯ್ತು ಕಾಮುಕರ ಅಟ್ಟಹಾಸ : ಮತ್ತೋರ್ವ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು : ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಯಾವುದೇ ಭಯವಿಲ್ಲದೇ ಪುಂಡ ಪೋಕರಿಗಳು ಯುವತಿಯರಿಗೆ ಕಿರುಕುಳ ನೀಡುವ ಘಟನೆಗಳು ವರದಿಯಾಗುತ್ತಿದೆ.

ಇದೀಗ ಅಂತಹದ್ದೇ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ. ಯುವತಿಯನ್ನು ಟಚ್ ಮಾಡಿ ಯುವಕನೋರ್ವ ವಿಕೃತಿ ಮೆರೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೋಟೆಲ್ ಗೆ ಬಂದಂತಹ ಯುವತಿಯ ಜೊತೆ ಗಲಾಟೆ ಮಾಡಿದ ಯುವಕರು ಯುವತಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ. ವಿಜಯನಗರದ ನಮ್ಮೂರ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ.

ಯುವತಿಯನ್ನು ಟಚ್ ಮಾಡಲು ಮೊದಲೇ ಪ್ಲ್ಯಾನ್ ಮಾಡಿಕೊಂಡ ಯುವಕರ ಗುಂಪು ಯುವತಿಗೆ ಕಿರುಕುಳ ನೀಡಿದ್ದಾರೆ. ಜನವರಿ 10ರಂದು ಈ ಸಂಬಂಧ ವಿಜಯನಗರ ಠಾಣೆಯಲ್ಲಿ FIR ದಾಖಲಾಗಿದ್ದು, . ಇದೀಗ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...