ಶಿರಸಿ : ಲೋಕಸಭೆ ಚುನಾವಣೆ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಬಿಜೆಪಿಯ ಶಾಸಕ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಸೇರ್ಪಡೆ ವದಂತಿ ಶುರುವಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜಕೀಯ ನಿಂತ ನೀರಲ್ಲ, ಶಿವರಾಮ್ ಹೆಬ್ಬಾರ್ ಪಕ್ಷ ಸೇರ್ಪಡೆ ಬಗ್ಗೆ ನನ್ನ ಜೊತೆಗೆ ಮಾತನಾಡಿಲ್ಲ. ಸೇರುವುದಾದರೆ ಸ್ಥಳೀಯರ ನಿರ್ಣಯ ಕೇಳುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ. ಅಲ್ಲದೆ, ರಾಜ್ಯಸಭೆ ಚುನಾವಣೆಗೆ ಗೈರಾಗುವ ಮೂಲಕ ಹೆಬ್ಬಾರ್ ಅವರು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಮಾತುಗಳೂ ಸಹ ಕೇಳಿಬರುತ್ತಿವೆ.