ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದ್ದು, 55 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ಕಳೆದ 2 ದಿನದ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಾಯಚೂರು ಜಿಲ್ಲೆಯ 55 ವರ್ಷದ ಮಹಿಳೆಯನ್ನು ಅಮೃತಹಳ್ಳಿಯ ಕಾಫಿ ಬೋರ್ಡ್ ಬಳಿ ಇರುವ ನಿರ್ಮಾಣ ಹಂತದ ಕಟ್ಟಡದ ಬಳಿ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಘಟನೆ ಕಳೆದ 2 ದಿನದ ಹಿಂದೆ ನಡೆದಿದ್ದು ಕಟ್ಟಡದ ಮಾಲೀಕ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಗಾರೆಕೆಲಸ ಮಾಡುತ್ತಿದ್ದ ಮಹಿಳೆಯನ್ನು ರೇಪ್ ಮಾಡಿ ಕೊಲೆ ಮಾಡಲಾಗಿದೆ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.