ಬೀದರ್ : ಬೀದರ್ ನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಎಟಿಎಂ ಗಳಿಗೆ ಹಣ ಹಾಕುವ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.
ಬೀದರ್ ನಗರದ ಶಿವಾಜಿ ಚೌಕ್ ನಲ್ಲಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಎಟಿಎಂಗೆ ಹಣ ಹಾಕುವ ವ್ಯಕ್ತಿಯ ಮೇಲೆ ಗುಂಡುಹಾರಿಸಿದ್ದಾರೆ. 5 ಸುತ್ತು ಗುಂಡು ಹಾರಿಸಿದ ಬಳಿಕ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.
ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಎಂಬುವವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಟಿಎಂ ಗಳಿಗೆ ಹಣ ಕೊಂಡೊಯ್ಯುವ ವಾಹನದ ಮೇಲೆ ದಾಳಿ ನಡೆಸಿ ಹಣದ ಬಾಕ್ಸ್ ಎಗರಿಸಲು ದುಷ್ಕರ್ಮಿಗಳು ಯತ್ನಿಸಿದ್ದು, ಆದರೆ ವೆಂಕಟೇಶ್ ಹಣದ ಬಾಕ್ಸ್ ಕೈ ಬಿಡಲಿಲ್ಲ. ಆದ್ದರಿಂದ ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿ ಹಣದ ಬ್ಯಾಗ್ ಕದ್ದೊಯ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.