ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಈ ಬೆನ್ನಲ್ಲೇ ಪ್ರಜ್ವಲ್ ಗೆ ವಿದೇಶಾಂಗ ಸಚಿವಾಲಯದಿಂದ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.
ಕಾರಣ ಕೇಳಿ ಪ್ರಜ್ವಲ್ ಗೆ ವಿದೇಶಾಂಗ ಸಚಿವಾಲಯದಿಂದ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಅತ್ಯಾಚಾರ ಪ್ರಕರಣ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಆರಂಭಿಸಿದೆ.
ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡಬೇಕೆಂಬ ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ವಿದೇಶಾಂಗ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಸರ್ಕಾರದಿಂದ ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು ಮಾಡುವ ಬಗ್ಗೆ ಪತ್ರ ಬಂದಿದ್ದು, ಅದರಂತೆ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದರು.