BREAKING : ʻಜನತಾ ದರ್ಶನʼದಲ್ಲಿ 148 ಮಂದಿ ವಿಶೇಷ ಚೇತನರ ಸಮಸ್ಯೆಗೆ ಸಿದ್ದರಾಮಯ್ಯ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಹಮ್ಮಿಕೊಂಡಿದ್ದು, ಇಂದಿನ ಜನತಾ ದರ್ಶನದಲ್ಲಿ ಸಮಸ್ಯೆ ಹೇಳಿಕೊಂಡು ಆಗಮಿಸಿದ್ದ ವಿಶೇಷ ಚೇತನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡಿದ್ದಾರೆ.

148 ಮಂದಿ ವಿಶೇಷ ಚೇತನರಿಂದ ಮೂರು ಚಕ್ರ ವಾಹನಕ್ಕೆ ಮನವಿ. ಸಿಡಾಕ್ ಸಂಸ್ಥೆಯಿಂದ ತರಬೇತಿ ಪಡೆದಿದ್ದರೂ ಎರಡು ವರ್ಷದಿಂದ ನೆರವು ನೀಡಿಲ್ಲ ಎಂಬ ದೂರು ಜನತಾ ದರ್ಶನದಲ್ಲಿ ಸಲ್ಲಿಕೆಯಾಯಿತು.

ತರಬೇತಿ ಪಡೆದಿರುವ 98 ಮಂದಿಗೆ ಮುಂದಿನ 15 ದಿನಗಳ ಒಳಗೆ ಸಾಲ ಸೌಲಭ್ಯ ಒದಗಿಸಬೇಕು. ಉಳಿದವರಿಗೆ ತ್ರಿಚಕ್ರ ವಾಹನ ಕೊಡಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿ ಆಯುಕ್ತರಾದ ತುಷಾರ ಗಿರಿನಾಥ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿ, ವಿಕಲಚೇತನರ ಸ್ವಾವಲಂಬಿ ಬದುಕಿನ ಕನಸಿಗೆ ನೆರವಾದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read