ಬೆಂಗಳೂರು : ರಾಜ್ಯದಲ್ಲಿ ಮತ್ತೆ ಬಿಟ್ ಕಾಯಿನ್ ಹಗರಣ ಸದ್ದು ಮಾಡುತ್ತಿದ್ದು, ಇಂದು ಬೆಳ್ಳಂಬೆಳಗ್ಗೆ ಪ್ರಮುಖ ಮೂವರು ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಎಸ್ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಿಟ್ ಕಾಯಿನ್ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ನಿನ್ನೆ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಇಂದು ಬೆಳ್ಳಂಬೆಳಗ್ಗೆ 6 ಗಂಟೆಗೆ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಸೇರಿದಂತೆ ಮೂವರು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದಾರೆ.
ಜಯನಗರದ ಶ್ರೀನಿವಾಸ್, ಸದಾಶಿವನಗರದ ಪ್ರಸಿದ್ಧ್ ಹಾಗೂ ಸುನೀಶ್ ಹೆಗ್ಡೆ ಮನೆಗಳ ಮೇಲೆ ದಾಳಿ ಮಾಡಲಾಗಿದ್ದು, ಎಸ್ ಐಟಿ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.