ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ ಡಿ ರೇವಣ್ಣರ ಮತ್ತೋರ್ವ ಪುತ್ರ ಸೂರಜ್ ರೇವಣ್ಣ ಕೂಡ ಜೈಲು ಪಾಲಾಗಿದ್ದಾರೆ.
ಎಂಎಲ್ ಸಿ ಸೂರಜ್ ರೇವಣ್ಣಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಈ ಆದೇಶ ಹೊರಡಿಸಿದೆ. ಕೆಲವೇ ಕ್ಷಣಗಳಲ್ಲಿ ಸೂರಜ್ ರೇವಣ್ಣರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗುತ್ತದೆ.
ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣದಲ್ಲಿ ಈಗಾಗಲೇ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿದ್ದು, ಇದೀಗ ಇಬ್ಬರು ಸಹೋದರರು ಕೂಡ ಜೈಲು ಸೇರಿದ್ದಾರೆ.ನ್ಯಾಯಾಂಗ ಬಂಧನದಲ್ಲಿದ್ದ ಸೂರಜ್ ರೇವಣ್ಣನನ್ನು ಜುಲೈ 03ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು. ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಸೂರಜ್ನನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದು, ಇದೀಗ ಕೋರ್ಟ್ ಜುಲೈ 18ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.