ತುಮಕೂರು : ಹೃದಯಾಘಾತದಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಚಿಕ್ಕನಾಯಕನಹಳ್ಳಿ ಬೈರಾಪುರದಲ್ಲಿ ಈ ಘಟನೆ ನಡೆದಿದೆ. ಎಸ್ ಎಸ್ ಎಲ್ ಸಿ ಓದುತ್ತಿದ್ದ ರಾಹುಲ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ.
ಬೈರಾಪುರ ಗ್ರಾಮದ ಜಯರಾಂ ಎಂಬವವರ ಪುತ್ರ ರಾಹುಲ್ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡು ಪೋಷಕರ ಆಕ್ರಂದನ ಹೇಳತೀರದಾಗಿದೆ. ನಿನ್ನೆ ಶಾಲೆ ಮುಗಿಸಿ ಮನೆಗೆ ಬಂದಿದ್ದ ರಾಹುಲ್ ಗೆ ರಾತ್ರಿ 9:30 ರ ವೇಳೆಗೆ ಎದೆನೋವು ಕಾಣಿಸಿಕೊಂಡಿತ್ತು, ಕೂಡಲೇ ರಾಹುಲ್ ನನ್ನು ಹುಳಿಯಾರು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಹುಳಿಯಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.