ಬೆಂಗಳೂರು : ಮಾ. 3 ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಮಾ.7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.ಮಾ. 3 ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಮಾ.7 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡಿಸುತ್ತೇನೆ ಎಂದು ಅವರು ಹೇಳಿದರು.
2025-26ನೇ ಸಾಲಿನ ರಾಜ್ಯ ಬಜೆಟ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧತೆ ಆರಂಭಿಸಿದ್ದು, ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಪೂರ್ವಭಾವಿ ಸಭೆಗಳನ್ನು ನಡೆಸಿದ್ದಾರೆ.
ಸಿದ್ದರಾಮಯ್ಯ ಅವರ ವಿವಿಧ ಇಲಾಖೆಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿದ್ದಾರೆ. ತಮ್ಮ ದಾಖಲೆಯ 16 ನೇ ಬಜೆಟ್ ಅನ್ನು ಮಂಡಿಸಲಿರುವ ಸಿದ್ದರಾಮಯ್ಯ ಬಜೆಟ್ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದೆ.
ರೈತರ ಬೇಡಿಕೆಗಳನ್ನು ನಿರಂತರವಾಗಿ, ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲೇ, ಆದ್ದರಿಂದ ರೈತರ… pic.twitter.com/cs48Dq7jqv
— Siddaramaiah (@siddaramaiah) February 17, 2025