ಬೆಂಗಳೂರು : ಕೋವಿಡ್ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ( Karnataka Govt) ಆದೇಶ ಹೊರಡಿಸಿದೆ.
ಡಿ.13 ರಂದು ವಿಧಾನಸೌಧದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು, ಎಫ್ ಐ ಆರ್ ದಾಖಲಾದ 2 ತಿಂಗಳ ಬಳಿಕ ಕೋವಿಡ್ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದ ಕೋವಿಡ್ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿ ಸರ್ಕಾರ ಆದೇಶ ಹೊರಡಿಸಿದೆ.ಪ್ರಕರಣದ ತನಿಖೆಗೆ ಎಸ್ ಐಟಿ ರಚಿಸಲು ಸಂಪುಟ ಸಭೆ ನಿರ್ಣಯಿಸಿತ್ತು, ಆದರೆ ಎಸ್ ಐ ಟಿ ರಚಿಸಿರಲಿಲ್ಲ. ಇದೀಗ 2 ತಿಂಗಳ ಬಳಿಕ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕೋವಿಡ್ 19 ಸಂದರ್ಭದಲ್ಲಿ ಪಿಪಿಇ ಕಿಟ್ ಹಾಗೂ ಎನ್-95 ಮಾಸ್ಕ್ ಸೇರಿದಂತೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದ ಅಕ್ರಮ ಪ್ರಕರಣದ ಸಂಬಂಧ ಜನಪ್ರತಿನಿಧಿಗಳು ಹಾಗೂ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಹಾಗೂ ಆರೋಗ್ಯ ಇಲಾಖೆಯ ಹಿಂದಿನ ಅಧಿಕಾರಿಗಳು, ವೈದ್ಯರು ಹಾಗೂ ಗುತ್ತಿಗೆದಾರರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.