alex Certify BREAKING : ರಾಜ್ಯ ಸರ್ಕಾರದ 5 ನೇ ‘ಗ್ಯಾರಂಟಿ’ ಯುವನಿಧಿ ಜಾರಿಗೆ ಮುಹೂರ್ತ ಫಿಕ್ಸ್ : ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯ ಸರ್ಕಾರದ 5 ನೇ ‘ಗ್ಯಾರಂಟಿ’ ಯುವನಿಧಿ ಜಾರಿಗೆ ಮುಹೂರ್ತ ಫಿಕ್ಸ್ : ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯದ ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಡಿ.26ರಿಂದ ಯುವನಿಧಿ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು. ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೊಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ. ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ., ಡಿಪ್ಲೊಮಾ ಹೊಂದಿರುವವರಿಗೆ 1,500 ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ
ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ. ನಿಗದಿ ಮಾಡಿದ್ದರೆ, ಡಿಪ್ಲೊಮ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ಸಿಗಲಿದೆ. ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ನಿರುದ್ಯೋಗಿ ಯುವಕರಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...