ತುಮಕೂರು : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಪ್ರಕರಣ ತನಿಖಾ ವರದಿ ಬಂದ ಮೇಲೆ ಸತ್ಯಾಂಶ ಹೊರ ಬರಲಿದೆ. ಹಲವು ನಾಯಕರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಆ ಹೇಳಿಕೆಗಳ ಬಗ್ಗೆಯೂ ತನಿಖೆ ಮಾಡಬೇಕು. ಸಮಗ್ರ ತನಿಖೆ ಆಗಲು ಸತ್ಯಾಂಶ ಹೊರಬರಲಿದೆ ಎಂದರು.
ಶಿರೋಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಶಿವಕುಮಾರ್ ನೇಣಿಗೆ ಶರಣಾಗಿದ್ದ. ಇದೀಗ ಶಿವಕುಮಾರ್ ಪತ್ನಿ ಮಲ್ಲಮ್ಮ ಅವರು ರೈತ ಆತ್ಮಹತ್ಯೆ ಎಂದು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.