ಬಳ್ಳಾರಿ, ಗದಗ ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬಳ್ಳಾರಿ, ಗದಗ , ಬೆಂಗಳೂರು, ಚಿಕ್ಕಮಗಳೂರು ಸೇರಿ ರಾಜ್ಯದ ಹಲವು ಕಡೆ ದಾಳಿ ನಡೆದಿದೆ.
ಬಳ್ಳಾರಿ ಜಿಲ್ಲೆಯಲ್ಲಿ ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ನಿವಾಸದ ಮೇಲೆ ದಾಳಿ ಮಾಡಿದ್ದು, ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಗದಗ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿ ನಡೆದಿದೆ. ಗದಗ -ಬೆಟಗೇರಿ ನಗರಸಭೆ ಇಂಜಿನಿಯರ್ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.