ಮಂಗಳೂರು : ಮಂಗಳೂರಿನಲ್ಲಿರುವ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿರೋಧಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ರಾಜ್ಯಪಾಲರ ಥಾಮರ್ ಚಂದ್ ಗೆಹಲೋತ್ ವಿರುದ್ಧ ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ನಿನ್ನೆ ರಾತ್ರಿ ದುಷ್ಕರ್ಮಿಗಳು ಅವರ ಮನೆಗೆ ಕಲ್ಲು ತೂರಿದ್ದಾರೆ ಎಂದು ತಿಳಿದು ಬಂದಿದೆ.ನಿನ್ನೆ ರಾತ್ರಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅವರ ಮನೆ ಮೇಲೆ ಕಲ್ಲು ತೂರಿದ್ದು, ಮನೆ ಕಿಟಕಿಯ ಗಾಜು ಗಾಜು ಪುಡಿ ಪುಡಿ ಆಗಿದೆ.