ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.
ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಅಪರಿಚಿತ ದುಷ್ಕರ್ಮಿಗಳು ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ಕಾರಿನ ಗಾಜುಗಳನ್ನು ಒಡೆದಿದ್ದಾರೆ. ಈ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತ್ ಜೋಡೋ ನ್ಯಾಯ್ ಯಾತ್ರೆ ಪಶ್ಚಿಮ ಬಂಗಾಳದಿಂದ ಬಿಹಾರಕ್ಕೆ ತೆರಳುತ್ತಿದ್ದಾಗ ರಾಹುಲ್ ಗಾಂಧಿ ಅವರ ಕಾರನ್ನು ಗುರಿಯಾಗಿಸಿಕೊಂಡು ಅದರ ವಿಂಡೋ ಗ್ಲಾಸ್ ಪುಡಿಪುಡಿ ಮಾಡಲಾಗಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.