ಬೆಂಗಳೂರು : ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆಬೆಂಗಳೂರು ಉತ್ತರ ತಾಲೂಕಿನ ಭವಾನಿ ನಗರದಲ್ಲಿ ನಡೆದಿದೆ.
ಮೃತನನ್ನು ವಿಷು ಉತ್ತಪ್ಪ (19) ಎಂದು ಗುರುತಿಸಲಾಗಿದೆ. ತಂದೆ ತಮ್ಮಯ್ಯ ರೇಷನ್ ತರಲು ಹೋದಾಗ ಪುತ್ರ ವಿಷು ಉತ್ತಪ್ಪ ಮನೆಯಲ್ಲಿದ್ದ ಗನ್ ತೆಗೆದುಕೊಂಡು ಎದೆಗೆ ಶೂಟ್ ಮಾಡಿಕೊಂಡಿದ್ದಾನೆ, ನಂತರ ತಂದೆಗೆ ಕರೆ ಮಾಡಿ ಇನ್ಮುಂದೆ ತಪ್ಪು ಮಾಡಲ್ಲ, ನಾನು ಎದೆಗೆ ಗುಂಡು ಹಾರಿಸಿಕೊಂಡಿದ್ದೇನೆ ಎಂದು ಹೇಳಿದ್ದಾನೆ. ಕೂಡಲೇ ಮನೆಗೆ ಬಂದ ತಂದೆ ಮಗನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.
ಕೊಡಗು ಮೂಲದ ತಮ್ಮಯ್ಯ ನೈಸ್ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ತಂದೆಯ ಗನ್ ತೆಗೆದುಕೊಂಡು ಮಗ ಎದೆಗೆ ಶೂಟ್ ಮಾಡಿಕೊಂಡಿದ್ದಾನೆ. ವಿಷು ಉತ್ತಪ್ಪ ಬಿಇ ವ್ಯಾಸಂಗ ಮಾಡುತ್ತಿದ್ದು, ದುಡುಕಿನ ನಿರ್ಧಾರ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.