ಪೆರ್ರಿ: ಮಧ್ಯಪಶ್ಚಿಮ ಅಮೆರಿಕ ರಾಜ್ಯ ಅಯೋವಾದ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಗುಂಡಿನ ದಾಳಿಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಅಯೋವಾದ ಪೆರ್ರಿ ಹೈಸ್ಕೂಲ್ ನಲ್ಲಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಆರನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇತರ ನಾಲ್ವರು ವಿದ್ಯಾರ್ಥಿಗಳು ಮತ್ತು ಶಾಲಾ ಆಡಳಿತಾಧಿಕಾರಿ ಗಾಯಗೊಂಡಿದ್ದಾರೆ.
ಆರನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಅದೇ ಶಾಲೆಯ ವಿದ್ಯಾರ್ಥಿ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಚಳಿಗಾಲದ ವಿರಾಮದ ನಂತರ ಪೆರ್ರಿ ಕಮ್ಯುನಿಟಿ ಸ್ಕೂಲ್ ಡಿಸ್ಟ್ರಿಕ್ಟ್ ಗೆ ಎರಡನೇ ಸೆಮಿಸ್ಟರ್ ನ ಪ್ರಾರಂಭವಾಗಿತ್ತು.