ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡೇಕೋಡಿ ಬಳಿ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗಿ ವಾಹನ ಸವಾರರು ಆತಂಕಗೊಂಡಿರುವ ಘಟನೆ ನಡೆದಿದೆ.
ಕುಮಟಾ ತಾಲೂಕಿನ ಕಡೇಕೋಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ನಡೆದಿದ್ದು, ಗೋವಾದಿಂದ ಮಂಗಳೂರಿಗೆ ಸಾಗುತ್ತಿದ್ದ ಟ್ಯಾಂಕರ್ ನಲ್ಲಿ ಅನಿಲ ಸೋರಿಕೆಯಾಗಿದೆ. ಅಡುಗೆ ಅನಿಲ ಎಂದು ಸ್ಥಳೀಯರು ಹಾಗೂ ವಾಹನ ಸವಾರರು ಆತಂಕಗೊಂಡಿದ್ದಾರೆ. ಆದರೆ ಟ್ಯಾಂಕರ್ ನೈಟ್ರೋಜನ್ ತುಂಬಿಕೊಂಡು ಹೋಗುತ್ತಿತ್ತು ಎನ್ನಲಾಗಿದೆ.