ಆಸ್ಪತ್ರೆಗೆ ದಾಖಲಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, 2-3 ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ರಜನಿಕಾಂತ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರು ಮೂವರು ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. 2-3 ದಿನಗಳಲ್ಲಿ ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.
ನಟ ರಜನಿಕಾಂತ್ ಅವರಿಗೆ ಸೋಮವಾರ ತಡರಾತ್ರಿ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 2020 ರಲ್ಲಿ ಅಧಿಕ ರಕ್ತದೊತ್ತಡ ನಂತರ ಅವರನ್ನು ಹೈದರಾಬಾದ್ನ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ತಮ್ಮ ರಾಜಕೀಯ ಪಕ್ಷವನ್ನು ಪ್ರಾರಂಭಿಸುವ ಒಂದೆರಡು ದಿನಗಳ ಮೊದಲು ಆಸ್ಪತ್ರೆ ಸೇರಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಆರೋಗ್ಯದ ದೃಷ್ಟಿಯಿಂದ ರಾಜಕೀಯಕ್ಕೆ ಬರುವುದಿಲ್ಲ ಎಂದು ಘೋಷಿಸಿದ್ದರು. ರಜನಿಕಾಂತ್ ಮೂರು ದಿನಗಳ ಕಾಲ ಚಿಕಿತ್ಸೆಗೆ ಒಳಗಾದ ನಂತರ ಅವರು ತಮ್ಮ ಚೆನ್ನೈ ನಿವಾಸಕ್ಕೆ ಮರಳಿದ್ದರು.