ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕುವಂತೆ ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ.
ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರಲು ಕೇಂದ್ರದೊಂದಿಗೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕುವಂತೆ ಎಎಪಿ ಸರ್ಕಾರಕ್ಕೆ ನಿರ್ದೇಶನ ನೀಡಿದ ದೆಹಲಿ ಹೈಕೋರ್ಟ್ ನಿರ್ದೇಶನದ ವಿರುದ್ಧ ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
ಸುಪ್ರೀಂ ಕೋರ್ಟ್ ಮುಂದೆ ಹಾಜರಾದ ದೆಹಲಿ ಸರ್ಕಾರದ ವಕೀಲ ಅಭಿಷೇಕ್ ಮನು ಸಿಂಘ್ವಿ, ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವಿನ ಅಧಿಕಾರ ಹಂಚಿಕೆಯನ್ನು ಹೈಕೋರ್ಟ್ ಮರು ವ್ಯಾಖ್ಯಾನಿಸಿದೆ ಎಂದು ಹೇಳಿದರು.