ನವದೆಹಲಿ : ಆಗಸ್ಟ್ 11 ರಂದು ನಿಗದಿಯಾಗಿದ್ದ ನೀಟ್-ಪಿಜಿ 2024 ಪರೀಕ್ಷೆಯನ್ನು ಮುಂದೂಡಲು ಅಥವಾ ಮರು ನಿಗದಿಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನೀಟ್ ಪಿಜಿ ಪರೀಕ್ಷೆಗಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು ಮುಂದೂಡುವ ಮನವಿಯ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ಪ್ರಾರಂಭವಾಗಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.
ಎನ್ಬಿಇಎಂಎಸ್ ನೀಟ್ ಪಿಜಿ 2024 ಪರೀಕ್ಷೆಯನ್ನು ಆಗಸ್ಟ್ 11, 2024 ರಂದು ಎರಡು ಪಾಳಿಗಳಲ್ಲಿ ನಡೆಸಲಿದೆ. 2.28 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.