ನವದೆಹಲಿ: ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ, 2004 ಅನ್ನು ಅಸಾಂವಿಧಾನಿಕ ಮತ್ತು ಜಾತ್ಯತೀತತೆಯ ಉಲ್ಲಂಘನೆ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.
ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ, 2004 ಅನ್ನು ಅಸಾಂವಿಧಾನಿಕ ಮತ್ತು ಜಾತ್ಯತೀತತೆಯ ಉಲ್ಲಂಘನೆ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಈ ಕಾಯ್ದೆಯನ್ನು ‘ಅಸಾಂವಿಧಾನಿಕ’ ಎಂದು ಘೋಷಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದೆ.