ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಅವರು ಬುಧವಾರ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಶಾಸಕ ಸುರಿಂದರ್ ಸಿಂಗ್ ಚೌಧರಿ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಲಾಯಿತು.
ವಿಧಾನಸಭಾ ಚುನಾವಣೆಯಲ್ಲಿ ನೌಶೇರಾದಿಂದ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಅವರನ್ನು ಸೋಲಿಸಿದ ಪಕ್ಷದ ಶಾಸಕ ಸುರಿಂದರ್ ಸಿಂಗ್ ಚೌಧರಿ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಲಾಯಿತು.
ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್ಕೆಐಸಿಸಿ) ನಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಒಮರ್ ಅಬ್ದುಲ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು, ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರು ಭಾಗವಹಿಸಿದ್ದರು.