ಮೂಡಿಗೆರೆ : ನೇಣು ಬಿಗಿದುಕೊಂಡು ಸರ್ವೆ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ.
ಶಿವಕುಮಾರ್ (45) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು, ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರಾದ ಶಿವಕುಮಾರ್ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಆದರೆ ಏಕಾಏಕಿ ಅವರು ಮೂಡಿಗೆರೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇರುವ ಬಾಡಿಗೆ ಮನೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.