ಇಂಗ್ಲೆಂಡ್ ವಿರುದ್ಧದ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ.
ರಾಜ್ಕೋಟ್, ರಾಂಚಿ ಮತ್ತು ಧರ್ಮಶಾಲಾದಲ್ಲಿ ನಡೆಯಲಿರುವ ಮೂರು ಟೆಸ್ಟ್ ಪಂದ್ಯಗಳಿಗೆ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಹೆಸರಿಸಲಾಗಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಸರಣಿಯ ಉಳಿದ ಪಂದ್ಯಗಳಿಗೆ ಆಯ್ಕೆಗೆ ಲಭ್ಯವಿರುವುದಿಲ್ಲ. ಕೊಹ್ಲಿ ನಿರ್ಧಾರವನ್ನು ಮಂಡಳಿಯು ಸಂಪೂರ್ಣವಾಗಿ ಗೌರವಿಸುತ್ತದೆ ಮತ್ತು ಬೆಂಬಲಿಸುತ್ತದೆ” ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಹಿಂದೆ ವರದಿಯಾದಂತೆ, ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಅವರನ್ನು ಫಿಟ್ನೆಸ್ ಕ್ಲಿಯರೆನ್ಸ್ಗೆ ಒಳಪಟ್ಟು ಹೆಸರಿಸಲಾಗಿದೆ. ವೇಗಿ ಮೊಹಮ್ಮದ್ ಸಿರಾಜ್ ಕೂಡ ಎರಡನೇ ಟೆಸ್ಟ್ನಿಂದ ವಿಶ್ರಾಂತಿ ಪಡೆದ ನಂತರ ಮರಳಿದ್ದಾರೆ. ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಭಾಗವಹಿಸುವುದು ಬಿಸಿಸಿಐ ವೈದ್ಯಕೀಯ ತಂಡದಿಂದ ಫಿಟ್ನೆಸ್ ಕ್ಲಿಯರೆನ್ಸ್ಗೆ ಒಳಪಟ್ಟಿರುತ್ತದೆ” ಎಂದು ಬಿಸಿಸಿಐ ತಿಳಿಸಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್ *, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.
ಮೂರನೇ ಟೆಸ್ಟ್ ಫೆಬ್ರವರಿ 15, 2024 ರಂದು ರಾಜ್ಕೋಟ್ ನಲ್ಲಿ ಪ್ರಾರಂಭವಾಗಲಿದ್ದು, ನಾಲ್ಕನೇ ಟೆಸ್ಟ್ ಫೆಬ್ರವರಿ 23, 2024 ರಿಂದ ರಾಂಚಿಯಲ್ಲಿ ಪ್ರಾರಂಭವಾಗಲಿದೆ. ಸರಣಿಯ ಐದನೇ ಮತ್ತು ಅಂತಿಮ ಟೆಸ್ಟ್ ಮಾರ್ಚ್ 07, 2024 ರಿಂದ ಧರ್ಮಶಾಲಾದಲ್ಲಿ ನಡೆಯಲಿದೆ.