ನವದೆಹಲಿ: ಮುಂಬರುವ ಏಷ್ಯಾ ಕಪ್ 2023 ಗಾಗಿ ಟೀಮ್ ಇಂಡಿಯಾ ತಂಡವನ್ನು ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಸೋಮವಾರ ಪ್ರಕಟಿಸಿದ್ದಾರೆ.
ಇನ್ನು ಏಷ್ಯಾಕಪ್ ಟೂರ್ನಿಗೆ ಟೀಮ್ ಇಂಡಿಯಾದ ಆಯ್ಕೆ ವಿಚಾರವಾಗಿ ಪ್ರಮುಖವಾಗಿರುವ ಕುತೂಹಲವೆಂದರೆ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಲಿದ್ದು, ಜಸ್ಪ್ರೀತ್ ಬುಮ್ರಾ ಕೂಡ 17 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ. ಶಮಿ, ಮೊಹಮ್ಮದ್. ಸಿರಾಜ್, ಪ್ರಸಿದ್ಧ್ ಕೃಷ್ಣ
ಟ್ರಾವೆಲಿಂಗ್ ಸ್ಟ್ಯಾಂಡ್-ಬೈ ಆಟಗಾರ: ಸಂಜು ಸ್ಯಾಮ್ಸನ್